Thursday, September 17, 2026

BDA Apartments

ನಾಳೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್ BDA JK_Adv BDA Adv
Home Front Page ನಾಳೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್

ನಾಳೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,9,2026 (www.justkannada.in):  ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಾಳೆ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 9.50ರ ವಿಮಾನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆಯ ಚರ್ಚೆ ಮಧ್ಯೆ , ಡಿಸಿಎಂ ಡಿ.ಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಾಳೆ  ಬಜೆಟ್ ಪೂರ್ವಭಾವಿ ಸಭೆ ನಡೆಸಬೇಕಿದೆ  ಆದರೂ ಪೂರ್ವಭಾವಿ ಸಭೆ ಬಿಟ್ಟು ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.  ಅಸ್ಸಾಂ ವಿಧಾನಸಭಾ ಚುನಾವಣೆ ಸಂಬಂಧ ಪ್ರಿಯಾಂಕ್ ಗಾಂಧಿ ಅವರು ಪ್ರಮುಖರೊಂದಿಗೆ ಚರ್ಚಿಸೋದಕ್ಕೆ ಪೂರ್ವಭಾವಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಭಾಗಿಯಾಗಲು ಡಿಸಿಎಂ ಡಿ.ಕೆ ಶಿವಕುಮಾರ್ ತೆರಳುತ್ತಿದ್ದಾರೆ ಎನ್ನಲಾಗಿದೆ.

Key words: DCM, D.K. Shivakumar, visit, Delhi