Sunday, August 23, 2026

BDA Apartments

Home Front Page ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ತಂದ ಕುತೂಹಲ

ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ತಂದ ಕುತೂಹಲ

ಬೆಂಗಳೂರು, ಮೇ 31, 2023 (www.justkannada.in): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ  ನಿವಾಸಕ್ಕೆ ಭೇಟಿ ನೀಡುತ್ತಿರುವುದು ಕುತೂಹಲ ಕೆರಳಿಸಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿ ಕೊಡಬೇಕೆಂಬ ಮಾತು ಕೇಳಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಚರ್ಚಿಸಲು ಡಿ.ಕೆ. ಶಿವಕುಮಾರ್ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ  ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.

ಆಂಧ್ರಪ್ರದೇಶದ ರಾಜಮಂಡ್ರಿಯಿಂದ ಮಂಗಳವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಿರುವ ಡಿ.ಕೆ. ಶಿವಕುಮಾರ್, ಲಕ್ಷ್ಮಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಹುಬ್ಬಳ್ಳಿಗೆ ತೆರಳಿ ಜಗದೀಶ್ ಶೆಟ್ಟರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ.