ಬೆಳಗಾವಿ, ಡಿಸೆಂಬರ್ 11,2025 (www.justkannada.in): ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ, ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ಕೊಡಲಿ ಎಂದು ಮಾರ್ಮಿಕ ಉತ್ತರ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಹೇಳಿದರು.
ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಬಿಜೆಪಿ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ದ್ವೇಷ ಭಾಷಣ ತಡೆ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧ ಮಾಡುತ್ತಿದೆ. ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಈ ಬಿಜೆಪಿಯವರು. ಸಂವಿಧಾನದ ಆಶಯಗಳ ಪ್ರಕಾರ ಅವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ ಎಂದು ಟಾಂಗ್ ಕೊಟ್ಟರು.
Key words: Yatindra Siddaramaiah, statement, DCM, DK Shivakumar







