ಬೆಂಗಳೂರು,ಡಿಸೆಂಬರ್,13,2025 (www.justkannada.in): ಮತಗಳ್ಳತನದ ವಿರುದ್ದ ನಾಳೆ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು ನಾನು ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ರಾಜ್ಯದಿಂದ ವೋಟ್ ಚೋರಿ ಅಭಿಯಾನ ಆರಂಭ ಆಗಿತ್ತು. ನಾಳೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಸಚಿವರು, ಶಾಸಕರು ಸಾವಿರಾರು ಕಾರ್ಯಕರ್ತರು ಹೋಗಿದ್ದಾರೆ ನಾನು ಕೂಡ ದೆಹಲಿಗೆ ಹೋಗುತ್ತೇನೆ ಎಂದರು.
ವೋಟ್ ಚೋರಿ ವಿರುದ್ದ ದೆಹಲಿಯಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಅವರಿಗೆ ಶಕ್ತಿ ತುಂಬುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: vote chori, protest, delhi, DCM, DK, Shivakumar







