ಬೆಂಗಳೂರು,ಡಿಸೆಂಬರ್,15,2025 (www.justkannada.in): ಬೆಂಗಳೂರಿನ ಅಭಿವೃದ್ಧಿಗೆ ಬರೋಬ್ಬರಿ 100 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಿರುವುದಾಗಿ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಅಭಿವೃದ್ಧಿಯ ಪಥದಲ್ಲಿ ನಮ್ಮ ಬೆಂಗಳೂರು. ಬೆಂಗಳೂರು ನಗರದ ಸಂಚಾರವನ್ನು ಸುಗಮಗೊಳಿಸಲು ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ನಮ್ಮ ಸರ್ಕಾರವು ಬದ್ಧವಾಗಿದೆ. ಈ ನಿಟ್ಟಿನಲ್ಲಿ, ನಗರದ ಪ್ರಮುಖ 75 ಜಂಕ್ಷನ್‌ಗಳ ಅಭಿವೃದ್ಧಿಗಾಗಿ ₹100 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
ಈಗಾಗಲೇ ಶೇ. 40ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಸುಲಭ ಸಂಚಾರಕ್ಕೆ ಅನುವು ಮಾಡಿಕೊಡುವುದು ಮತ್ತು ಉತ್ತಮ ಮೂಲಸೌಕರ್ಯ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
Key words: Our Bengaluru, development, Rs 100 crore, DCM, DK Shivakumar







