ಬೆದರಿಕೆ ಹಾಕೋದು ಪ್ರಜಾಪ್ರಭುತ್ವದ ಲಕ್ಷಣ ಅಲ್ಲ- ಡಿಸಿಎಂ ಡಿಕೆಶಿ ವಿರುದ್ದ ಸಿ.ಟಿ ರವಿ ಕಿಡಿ

ಬೆಳಗಾವಿ,ಡಿಸೆಂಬರ್,16,2025 (www.justkannada.in):  ಅಪಾರ್ಟ್ ಮೆಂಟ್ ನಿವಾಸಿಗಳ ಜೊತೆ ಸಂವಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಬೆದರಿಕೆ ಹಾಕೋದು ಪ್ರಜಾಪ್ರಭುತ್ವದ ಲಕ್ಷಣ ಅಲ್ಲ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಬೆದರಿಕೆ ಹಾಕುವುದು ಪ್ರಜಾಪ್ರಭುತ್ವದ ಲಕ್ಷಣ ಅಲ್ಲ.   ಡಿಕೆ ಶಿವಕುಮಾರ್ ವ್ಯಕ್ತಿತ್ವಕ್ಕೂ ಶೋಭೆ ತರಲ್ಲ. ಪ್ರಜಾಪ್ರಭುತ್ವದಲ್ಲಿ ನಮ್ಮನ್ನ ಮೇಲೆ ಕೂರಿಸೋದು ಪ್ರಜೆಗಳು.  ಅವರ ಮೇಲೆ ದಬ್ಬಾಳಿಕೆ ಮಾಡುತ್ತೀರಾ? ಎಂದು ವಾಗ್ದಾಳಿ ನಡೆಸಿದರು.

ಡಿಸಿಎಂ ಡಿಕೆ ಶಿವಕುಮಾರ್ ನಡೆ ಕುರಿತು ಉದ್ಯಮಿ ಮೋಹನ್ ದಾಸ್ ಪೈ ಕೂಡ  ಆಕ್ಷೇಪ ವ್ಯಕ್ತಪಡಿಸಿದ್ದರು. ನೀವು ನಮ್ಮ ಮಿನಿಸ್ಟರ್, ಮಾಸ್ಟರ್ ಅಲ್ಲ ಎಂದು ಟೀಕಿಸಿದ್ದರು.

Key words: Threatening, democracy, CT Ravi, DCM, DK Shivakumar