ಓಲೈಕೆ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ: ಮಾನವೀಯತೆ  ದೃಷ್ಠಿಯಿಂದ ಪರಿಹಾರ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಡಿಸೆಂಬರ್,30,2025 (www.justkannada.in): ಕೋಗಿಲು ಲೇಔಟ್ ಬಡಾವಣೆ ನಿವಾಸಿಗಳಿಗೆ ಮನೆ ಹಂಚಿಕೆ ವಿಚಾರ ಸಂಬಂಧ ಓಲೈಕೆ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ. ಮಾನವೀಯತೆ  ದೃಷ್ಠಿಯಿಂದ ಪರಿಹಾರ ನೀಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಮಾನವೀಯತೆ ದೃಷ್ಠಿಯಿಂದ ಮನೆ ಕೊಡುತ್ತಿದ್ದೇವೆ. ಯಾರು ಒತ್ತುವರಿ ಮಾಡಬಾರದು. ಕಾನೂನು ಕ್ರಮ ಕೈಗೊಳ್ಳುತ್ತೇವೆ. ಓಲೈಕೆ ರಾಜಕಾರಣ ಮಾಡುವ ಪ್ರಶ್ನೆ ಇಲ್ಲ ಎಂದರು.

ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸಭೆ ಕರೆದಿದ್ದು, ಅಲ್ಲಿ ಈ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗುವುದು. ಅರ್ಹ ಬಡವರಿಗೆ ಯಾವುದೇ ಅನ್ಯಾಯವಾಗದಂತೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಸರ್ಕಾರವು ಸುಮಾರು 9-10 ವರ್ಷಗಳ ಹಿಂದೆಯೇ ಘನತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ ಮಂಜೂರು ಮಾಡಿತ್ತು. ಆದರೆ, ಕೆಲವರು ಈ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿ ಗುಡಿಸಲುಗಳನ್ನು ನಿರ್ಮಿಸಿದ್ದರು, ಹಲವಾರು ಬಾರಿ ಸಹ ನೋಟಿಸ್ ನೀಡಲಾಗಿತ್ತು. ನಂತರ ನಮ್ಮ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವಿಚಾರದಲ್ಲಿ ಕೆಲವರು ಅನಗತ್ಯವಾಗಿ ರಾಜಕೀಯ ಬೆರೆಸುತ್ತಿದ್ದಾರೆ. ಕೇರಳದ ಮುಖ್ಯಮಂತ್ರಿಗಳು ಸೇರಿದಂತೆ ಕಮ್ಯುನಿಸ್ಟ್ ಪಕ್ಷದ ನಾಯಕರು ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅಲ್ಪಸಂಖ್ಯಾತರ ಓಲೈಕೆಗಾಗಿ ಸುಳ್ಳು ಸಹಾನುಭೂತಿ ತೋರುತ್ತಿದ್ದಾರೆ ಎಂದು ಕಿಡಿಕಾರಿದರು.

Key words: kogilu, Refugees, politics, DCM, DK Shivakumar