ಇದೇ ವರ್ಷದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜನವರಿ,1,2026 (www.justkannada.in): ಇದೇ ವರ್ಷದಲ್ಲಿ  ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿ.ಕಿಎ.ಶಿವಕುಮಾರ್, 2025ರ ವರ್ಷದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ. 2026ರ ವರ್ಷ ಶುಭ ಲಗ್ನದಲ್ಲಿ ಆರಂಭವಾಗಿದೆ. ಗೃಹ ಇಲಾಖೆ ಭದ್ರತೆಯಿಂದ ಬೆಂಗಳೂರಿನಲ್ಲಿ 2026ರ ವರ್ಷವನ್ನು ಸ್ವಾಗತಿಸಿದೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ  ಗೃಹ ಸಚಿವ ಪರಮೇಶ್ವರ್  ಸೇರಿ ಇಡೀ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಇನ್ನು 2026ರ ಈ ವರ್ಷದಲ್ಲಿಯೇ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ ಎಂದ ಡಿಸಿಎಂ ಡಿಕೆ ಶಿವಕುಮಾರ್, ನೀರಾವರಿ ಇಲಾಖೆಯಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಯುಕೆಪಿ, ತುಂಗಾಭದ್ರ ಯೋಜನೆಯಲ್ಲಿ ನಾವು ಕೈಗೊಂಡ ತೀರ್ಮಾನ, ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಅವರ ನಂಬಿಕೆ ಉಳಿಸಿಕೊಳ್ಳಲು, ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ನುಡಿದರು.

Key words: local bodies, Election, this year, DCM, DK Shivakumar