ಬೆಂಗಳೂರು,ಮೇ,25,2026 (www.justkannada.in): ಗ್ಯಾರಂಟಿ ಯೋಜನೆಗಳ ಹಣ ದುರ್ಬಳಕೆಯಾಗುತ್ತಿದ್ದು ಈ ಬಗ್ಗೆ ಪರಿಶೀಲನೆಗೆ ಸೂಚನೆ ನೀಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳಲ್ಲಿ ಸುಮಾರು 100 ಕೋಟಿ ರೂಪಾಯಿ ಮಿಸ್ ಯೂಸ್ ಆಗುತ್ತಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದಿದೆ. ಸತ್ತವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ. ಸರಿಯಾಗಿ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದೆಯಾ ಗೊತ್ತಿಲ್ಲ ಹೀಗಾಗಿ ಸರಿಯಾದ ದಾಖಲೆ ಕೊಡಿ ಅಂತಿದ್ದೇವೆ ಎಂದರು.
ಗೃಹ ಲಕ್ಷ್ಮೀ ಯೋಜನೆಯಲ್ಲೇ 100 ಕೋಟಿ ರೂ. ದುರ್ಬಳಕೆಯಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
Key words: Revision, guarantee schemes, misused, DCM, DK Shivakumar







