ಬೆಂಗಳೂರು,ಮೇ,1,2025 (www.justkannada.in): ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು ಜಾತಿಗಣತಿಗೆ ನಿರ್ಧರಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನಗಣತಿಗೆ ಆಗ್ರಹ ಮಾಡಿದ್ದರು. ಎಲ್ಲರಿಗೂ ನ್ಯಾಯ ಒದಗಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ನ್ಯಾಯ ಸೀಗಬೇಕು ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ದಾಂತ ಎಂದರು.
ಜಾತಿ ಜನಗಣತಿಗೆ ಕರ್ನಾಟಕ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ. ರಾಹುಲ್ ಗಾಂಧಿ ಅವರು ಹೇಳಿದಂತೆ ಜನಗಣತಿ, ಜಾತಿಗಣತಿಗೆ ಸಮಯ ನಿಗದಿ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು.
Key words: Central Government, caste census, insistence, DCM, DK Shivakumar