ಕೃಷ್ಣ ನದಿ ವಿವಾದ: ದೆಹಲಿಗೆ ಹೋಗಿ ಕೇಂದ್ರ ಸಚಿವರಿಗೆ ನಮ್ಮ ನಿಲುವು ತಿಳಿಸುತ್ತೇವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,5,2025 (www.justkannada.in): ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯ ಹಿನ್ನೆಲೆಯಲ್ಲಿ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್  ಕೃಷ್ಣ ನದಿ ವಿವಾದ ಸಂಬಂಧ  ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದೇವೆ.  ಈ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ ಮಾಹಿತಿ ಪಡೆದು ನಮ್ಮ ನಿಲುವು ತಿಳಿಸುತ್ತೇವೆ. ದೆಹಲಿಗೆ ಹೋಗಿ ತಮ್ಮ ನಿಲುವುವನ್ನ ಕೇಂದ್ರ ಸಚಿವರಿಗೆ ತಿಳಿಸುತ್ತೇವೆ ಎಂದರು.

ಕೃಷ್ಣಾ ನದಿ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ  ಕಳೆದ ಎರಡು ದಿನಗಳ ಹಿಂದೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು ಸಭೆಯಲ್ಲಿ ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ  ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದರು.

Key words: Krishna River dispute, Minister, DCM DK Shivakumar