Saturday, September 5, 2026

BDA Apartments

Home Front Page ಈ ಬಾರಿ ನನ್ನ ಜನ್ಮದಿನಾಚಾರಣೆ ಬೇಡ: ಯೋಧರ ಜತೆ ನಿಲ್ಲೋಣ-ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಈ ಬಾರಿ ನನ್ನ ಜನ್ಮದಿನಾಚಾರಣೆ ಬೇಡ: ಯೋಧರ ಜತೆ ನಿಲ್ಲೋಣ-ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು,ಮೇ,10,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ, ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಈ ಸಂದರ್ಭದಲ್ಲಿ  ನನ್ನ ಜನ್ಮ ದಿನಾಚರಣೆ ಮಾಡುವುದು  ಬೇಡ ಎಂದು ತಮ್ಮ ಅಭಿಮಾನಿಗಳಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಲ್ಲಿ  ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಯೋಧರು ಭಯೋತ್ಪಾದನೆ ವಿರುದ್ಧ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ. ನನ್ನ ಜನ್ಮದಿನದ ಸಂದರ್ಭದಲ್ಲಿ ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದಿದ್ದಾರೆ.

ಹಾಗೆಯೇ ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದು ಜಾಹೀರಾತುಗಳನ್ನು ನೀಡುವುದನ್ನ ಮಾಡಬಾರದು.  ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Key words: Don’t, celebrate, my birthday, DCM DK Shivakumar