ನಾವ್ಯಾರು ಮಳೆ ತಪ್ಪಿಸಲು ಆಗಲ್ಲ: ಮಳೆ ಸಮಸ್ಯೆ ಪರಿಹಾರಕ್ಕೆ ಹೊಸ ಪ್ಲಾನ್-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,20,2025 (www.justkannada.in):  ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು ರಾಜ್ಯರಾಜಧಾನಿ ಬೆಂಗಳೂರು ಭಾರಿ ಮಳೆಉ ಹೊಡೆತಕ್ಕೆ ತತ್ತರಿಸಿದೆ. ರಸ್ತೆಗಳು ಜಲಾವೃತಗೊಂಡಿದ್ದು ಮನೆಗಳಿಗೆ ನೀರು ನುಗ್ಗುತ್ತಿದೆ. ಈ ಮಧ್ಯೆ ಮಳೆ ಸಮಸ್ಯೆ ಪರಿಹಾರಕ್ಕೆ ಹೊಸ ಪ್ಲಾನ್ ರೂಪಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ನಾವ್ಯಾರು ಮಳೆ ತಪ್ಪಿಸಲು ಆಗಲ್ಲ. ಏನು ತೊಂದರೆಯಾಗದಂತೆ ದೇವರಲ್ಲಿ ಪ್ರಾರ್ಥನೆ ಮಾಡೋಣ. ಮಳೆಯ ಸಮಸ್ಯೆ ಬಗ್ಗೆ ಸಭೆ ಮಾಡಿದ್ದೇನೆ. ಮಳೇ ಸಮಸ್ಯೆ ಪರಿಹಾರಕ್ಕೆ ಹೊಸ ಪ್ಲಾನ್ ರೂಪಿಸಲಾಗಿದೆ.  ಹೊಸ ಯೋಜನೆ ಬಗ್ಗೆ ನಾಳೆ ಮಾತನಾಡುತ್ತೇನೆ’ ಎಂದರು.

ಮಳೆಯಿಂದಾಗಿ ಇಬ್ಬರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಅಧಿಕಾರಿಗಳು ಫಿಲ್ಡ್ ನಲ್ಲಿದ್ದಾರೆ. ನಾಳೆ ಸಿಎಂ ಸಿಟಿ ರೌಂಡ್ಸ್ ಮಾಡಲಿದ್ದಾರೆ ಎಂದರು.

Key words: New plan, solve, rain problem, DCM, DK Shivakumar