Saturday, August 15, 2026

BDA Apartments

Home Front Page ಆಡಳಿತದಲ್ಲಿ ಸಿಎಂ ಕಂಟ್ರೋಲ್ ಕಳೆದುಕೊಂಡಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

ಆಡಳಿತದಲ್ಲಿ ಸಿಎಂ ಕಂಟ್ರೋಲ್ ಕಳೆದುಕೊಂಡಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2025 (www.justkannada.in): ಶಾಸಕರ ಅಸಮಾಧಾನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ  ಆಡಳಿತದಲ್ಲಿ ಗ್ರಿಪ್ ಕಳೆದುಕೊಳ್ಳುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯ ಕಂಟ್ರೋಲ್ ಕಳೆದುಕೊಂಡಿಲ್ಲ. ಶಾಸಕರ ಮೇಲೆ ಸಿಎಂ ಸಿದ್ದರಾಮಯ್ಯ ಹಿಡಿತ ಕಳೆದುಕೊಂಡಿಲ್ಲ. ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯ ಹಿಡಿತ ಸಾಧಿಸಿದ್ದಾರೆ.  ಸಿಎಂ ಯಾವ ವಿಚಾರದಲ್ಲೂ ನಿಯಂತ್ರಣ ಕಳೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕರ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಮಗೆ ಹೈಕಮಾಂಡ್ ಇದೆ. ಎಲ್ಲವನ್ನೂ ನೋಡಿಕೊಳ್ಳುತ್ತದೆ . ಎಲ್ಲರ ಜೊತೆಗೂ ವರಿಷ್ಠರು ಮಾತನಾಡುತ್ತಾರೆ.  ನಾನು ಎಲ್ಲರ ಜೊತೆ ಮಾತನಾಡಿದ್ದೇನೆ. ಏನು ಸಮಸ್ಯೆ ಇಲ್ಲ ಎಂದರು.vtu

Key words: CM, control, administration, DCM, DK Shivakumar