ಬೆಂಗಳೂರು,ಜುಲೈ,2,2025 (www.justkannada.in): ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನ ಸಿಎಂ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದಲ್ಲಿ ಶಿಸ್ತು ಮುಖ್ಯ, ಪಕ್ಷದ ಶಿಸ್ತು ಯಾರೂ ಉಲ್ಲಂಘಿಸಬಾರದು ಬೇರೆಯವರಿಗೂ ನೋಟಿಸ್ ಕೊಡಬೇಕಾಗುತ್ತದೆ ಎಂದರು.
ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ ಹೀಗಾಗಿ ಬೇರೆ ಬೇರೆ ಯಾರೂ ಅಪಸ್ವರ ಎತ್ತಬಾರದು. ಪಕ್ಷಕ್ಕೆ ನನ್ನಂತಹ ನೂರಾರು ಕಾರ್ಯಕರ್ತರು ಕಷ್ಟಪಟ್ಟಿದ್ದಾರೆ. ನಾನು ಒಬ್ಬನೇ ಕಷ್ಟಪಟ್ಟಿದ್ದೀನಾ. ಲಕ್ಷಾಂತರ ಜನ ಕಷ್ಟಪಟ್ಟಿದ್ದಾರೆ. ನಾವು ಮೊದಲು ಅವರ ಬಗ್ಗೆ ಯೋಚನೆ ಮಾಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: No need, tell, CM , DCM, DK Shivakumar