ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಈಡುಗಾಯಿ ಒಡೆದ ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು,ಜುಲೈ,4,2025 (www.justkannada.in): ಇಂದು ಆಷಾಢ ಮಾಸದ 2ನೇ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಪತ್ನಿ ಉಷಾ, ಪುತ್ರಿ ಐಶ್ವರ್ಯ ಅವರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ 11 ಇಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನನಗೆ ಏನು ಬೇಕೋ ಅದನ್ನೇ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಬುದ್ದಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿನಂತೆ ನಡೆದುಕೊಂಡು ಹೋಗೋಣ ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದರು.vtu

Key words: DCM, DK Shivakumar, visit, Chamundi hills