ಡಿಸಿಎಂ ಡಿಕೆ ಶಿವಕುಮಾರ್ ಗೆ ಜ್ವರ: ಇಂದಿನ ಕಾರ್ಯಕ್ರಮಗಳು ರದ್ದು

ಬೆಂಗಳೂರು,ಜುಲೈ,16,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳು ದಿಢೀರ್ ರದ್ದಾಗಿವೆ.

ಡಿಕೆ ಶಿವಕುಮಾರ್ ಅವರಿಗೆ ಜ್ವರವಿದ್ದು ಹೀಗಾಗಿ ಅವರು ಇದೀಗ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ನಡುವೆ ಇಂದು ನಿಗದಿಯಾಗಿದ್ದ ಎಲ್ಲ ಸರ್ಕಾರಿ, ಖಾಸಗಿ ಕಾರ್ಯಕ್ರಮಗಳು ದಿಢೀರ್ ರದ್ದಾಗಿವೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು.vtu

Key words: DCM, DK Shivakumar, fever,  Today, programs, cancelled