ಮಹದಾಯಿ ವಿಚಾರದಲ್ಲಿ ಗೋವಾ ರಾಜಕೀಯ: ಒಗ್ಗಟ್ಟಾಗಿ ಹೋರಾಡಬೇಕು-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜುಲೈ, 24,2025 (www.justkannada.in):  ಮಹದಾಯಿ ಯೋಜನೆ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮಹದಾಯಿ ಯೋಜನೆ ವಿಚಾರವಾಗಿ ಕೇಂದ್ರ ಜಲಶಕ್ತಿ, ಅರಣ್ಯ ಸಚಿವರು ರಾಜಕೀಯ ಮಾಡಲ್ಲ. ಈ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಿಗೆ ಮನವಿ ಮಾಡುತ್ತೇವೆ. ಫಾರೆಸ್ಟ್ ಕ್ಲಿಯರನ್ಸ್​ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತಾಡುವೆ ಎಂದರು.

ಮಹದಾಯಿ ವಿಚಾರ ಇದು ನಮ್ಮ ಸ್ವಾಭಿಮಾನದ ಪ್ರಶ್ನೆ, 28 ಸಂಸದರು ಇದ್ದೇವೆ. ಇಂತಹ ಸಂದರ್ಭದಲ್ಲಿ ಬಾಯಿ ಮುಚ್ಚಿ ಕುಳಿತುಕೊಳ್ಳುವುದು ತಪ್ಪು. ಕರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಒಂದಾಗಬೇಕು. ಒಂದು ಎಂಪಿಗಾಗಿ ನಾವು ರಾಜ್ಯವನ್ನು ಮಾರಿಕೊಳ್ಳಲು ಸಿದ್ಧವಿಲ್ಲ. ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: Goa, politics , Mahadayi issue, DCM,  DK Shivakumar