ಬೆಂಗಳೂರು,ಜುಲೈ, 29,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ , ರಸಗೊಬ್ಬರದ ಕೊರತೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಕೃಷಿ ಸಚಿವರು ಹಾಗೂ ರಸಗೊಬ್ಬರಗಳ ಸಚಿವರ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದುಮ ವ್ಯವಸಾಯದ ಭೂಮಿ ವಿಸ್ತರಣೆಯಾಗಿದೆ, ರೈತರಿಗೆ ಒಳ್ಳೆಯದಾಗುತ್ತಿದೆ. ಇದು ಸ್ವಾಗತಾರ್ಹವಾದದು ಎಂದರು.
ರಸಗೊಬ್ಬರ ನಮ ಬಳಿ ಇಲ್ಲ. ಕೇಂದ್ರ ಸರ್ಕಾರ ಕೊಡಬೇಕು ನಾವು ಹಂಚಿಕೆ ಮಾಡಬೇಕು. ಹಂಚಿಕೆಯಲ್ಲಿ ಯಾವುದಾದರೂ ಲೋಪಗಳಾಗಿದ್ದರೆ ಅದರ ಪರಿಶೀಲನೆ ಮಾಡಲಿ. ಆದರೆ ಯಾವ ಕಾರಣಕ್ಕೆ ಬಿಜೆಪಿ ಪ್ರತಿಭಟನೆ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರ ಗೊಬ್ಬರ ಕೊಡಲಾಗದೆ ರೈತರ ಮೇಲೆ ಗೋಲಿಬಾರ್ ನಡೆಸಿತ್ತು. ನಾವು ಆ ರೀತಿ ಯಾವುದನ್ನೂ ಮಾಡಿಲ್ಲ ಎಂದು ಟಾಂಗ್ ಕೊಟ್ಟರು.
Key words: Fertilizer, shortage , BJP, protests, DCM, DK Shivakumar