ಡಿಸಿಎಂ ಡಿಕೆಶಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಹಿರಿಯ ನಟಿಯರು

ಬೆಂಗಳೂರು,ಸೆಪ್ಟಂಬರ್,12,2025 (www.justkannada.in): ನಟ ದಿ. ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ದಿ. ಬಿ.ಸರೋಜಾದೇವಿ ಅವರಿಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಹಿರಿಯ ನಟಿಯರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಇಂದು ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾದ ಹಿರಿಯ ನಟಿಯರಾದ ಜಯಮಾಲ, ಶೃತಿ ಹಾಗೂ ಮಾಳವಿಕ ಅವಿನಾಶ್ ಅವರು ಧನ್ಯವಾದ ಹೇಳಿದರು.

ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದ ಮೂವರು ಹಿರಿಯ ನಟಿಯರು ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಮನವಿ ಮಾಡಿದ್ದರು. ಇದೀಗ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಟ ದಿ. ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ದಿ. ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

Key words: Veteran ,actresses, Meet, DCM. DK Shivakumar,