ಸೆ.26ರಿಂದ ‘ಕಾವೇರಿ ಆರತಿ’:  ಸ್ಥಳ, ಸಿದ್ದತಾ ಕಾರ್ಯ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ,ಸೆಪ್ಟಂಬರ್,25,2025 (www.justkannada.in): ಕೆಆರ್‌ಎಸ್‌ನ ಬೃಂದಾವನದಲ್ಲಿ ಸೆಪ್ಟೆಂಬರ್‌ 26ರಿಂದ 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್  ಸ್ಥಳ ಹಾಗೂ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಬೃಂದಾವನದ ದೋಣಿ ವಿಹಾರ ಕೇಂದ್ರದಲ್ಲಿರುವ ಚಿಕ್ಕ ಕಾವೇರಿ ಪ್ರತಿಮೆಯ ಮುಂಭಾಗದಲ್ಲಿ ಕಾವೇರಿ ಆರತಿ ಕಾರ್ಯಕ್ರಮಗಳು ನಡೆಯಲಿವೆ. ಹೀಗಾಗಿ ಕಾವೇರಿ ಆರತಿಯ ಸ್ಥಳ, ಮನರಂಜನೆಯ ವೇದಿಕೆ, ವೀಕ್ಷಕರಿಗೆ ಆಸನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ, ಕಾರ್ಯಕ್ರಮ ಯಾವುದೇ ಲೋಪವಿಲ್ಲದೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಬಳಿಕ ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತರಾದ  ರಾಮ್ ಪ್ರಸಾದ್ ಮನೋಹರ್ ಅವರು‌ ಕಾವೇರಿ ಆರತಿಯ ರೂಪುರೇಷೆ ಕುರಿತು ವಿವರಿಸಿದರು.

ಇದೇ ವೇಳೆ ಕಾವೇರಿ ಆರತಿಯ ಪೂರ್ವ ತಾಲೀಮು ಅನ್ನು ಡಿಸಿಎಂ ಡಿಕೆ ಶಿವಕುಮಾರ್  ವೀಕ್ಷಿಸಿದರು.  ನೋಡಲು ಕಣ್ಮನಸೆಳೆಯುವಂತಿತ್ತು. ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಜಗತ್ತಿಗೆ ಸಾರುವುದರ ಜೊತೆಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವುದೇ ನಮ್ಮ ಗುರಿಯಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Cauvery Aarati, DCM, DK Shivakumar, preparations