ಸಿಟಿ ರೌಂಡ್ಸ್: ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್  

ಬೆಂಗಳೂರು,ಸೆಪ್ಟಂಬರ್,30,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದ ಜನರು ಬೇಸತ್ತಿದ್ದು ಅವುಗಳನ್ನ ಮುಚ್ಚುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಿಟಿ ರೌಂಡ್ಸ್ ಹಾಕಿ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದಾರೆ.

ಈ ಮಧ್ಯೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಕೈಗೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನ ಪರಿಶೀಲನೆ ನಡೆಸಿದ್ದರು.  ಅಲ್ಲದೆ ರಸ್ತೆ ಮಧ್ಯದಲ್ಲಿ ತ್ಯಾಜ್ಯ ಸುರಿದಿದ್ದಕ್ಕೆ ಗರಂ ಆಗಿ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದರು.

ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದು, ರಸ್ತೆಗುಂಡಿಗಳನ್ನು ಮುಚ್ಚುತ್ತಿರುವ ಅಧಿಕಾರಿಗಳ ಕಾರ್ಯವೈಖರಿಯನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಚಾಲುಕ್ಯ ಸರ್ಕಲ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಿನ್ಸ್ ಸ್ಕ್ವೇರ್ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.

Key words: DCM, DK Shivakumar, City, Rounds,