ಬೆಂಗಳೂರು,ಅಕ್ಟೋಬರ್,15,2025 (www.justkannada.in): ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್ಲೈನ್ನಲ್ಲೇ ಪಡೆಯುವುದಕ್ಕೆ ಇಂದು ಚಾಲನೆ ನೀಡಲಾಯಿತು.
ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಚಾಲನೆ ನೀಡಿದರು.
ಈ ಕುರಿತು ಟ್ವಿಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, 2000 ಚ.ಮೀ.ಗಳವರೆಗಿನ ನಿವೇಶನಗಳಿಗೆ https://bbmp.karnataka.gov.in/BtoAKhata ವೆಬ್ಸೈಟ್ನಲ್ಲಿ ಹಾಗೂ 2000 ಚ.ಮೀ.ಗೂ ಹೆಚ್ಚಿನ ನಿವೇಶನಗಳಿಗೆ https://bpas.bbmp.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಇದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದ್ದು, ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ತಾಪತ್ರಯ ಕಡಿಮೆ ಆಗಲಿದೆ ಎಂದಿದ್ದಾರೆ.
ನವೆಂಬರ್ 1 ನೇ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
Key words: A-Khata, B-Khata, conversion, DCM, DK Shivakumar







