ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ನವೆಂಬರ್,21,2025 (www.justkannada.in): ಐದು ವರ್ಷವೂ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಐದು ವರ್ಷ ತಾವೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ ಸಂತೋಷ. ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ. ಅವರಿಗೆ ಪಕ್ಷವು ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದರು.

ತಮ್ಮ ಪರವಾಗಿ ಸಚಿವರು, ಶಾಸಕರು, ಎಂಎಲ್‌ ಸಿಗಳು ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ಈ ಬಗ್ಗೆ ನನಗೆ ಗೊತ್ತಿಲ್ಲ. ಯಾರೂ ನನ್ನ ಬಳಿ ಕೇಳಿಯೂ ಇಲ್ಲ. ಈ ವಿಚಾರ ನನಗೆ ಗೊತ್ತೂ ಇಲ್ಲ ಎಂದರು.

Key words: CM, Siddaramaiah, DCM, DK Shivakumar