Saturday, October 24, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ಅಧಿಕಾರ ಹಂಚಿಕೆ ಬಗ್ಗೆ ಮಾತುಕತೆ ಆಗಿದೆಯೋ? ಇಲ್ಲವೋ?  ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

ಅಧಿಕಾರ ಹಂಚಿಕೆ ಬಗ್ಗೆ ಮಾತುಕತೆ ಆಗಿದೆಯೋ? ಇಲ್ಲವೋ?  ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ನವೆಂಬರ್,29,2025 (www.justkannada.in):  ಅಧಿಕಾರ ಹಂಚಿಕೆ ನಾಯಕತ್ವ ಬದಲಾವಣೆ ಬಗ್ಗೆ ಸಾಕಷ್ಟು ಗೊಂದಲ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದು ಈ ಮಧ್ಯೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ಆಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನಮ್ಮದು ಒಂದೆ ಗುಂಪು ಹೈಕಮಾಂಡ್ ಗುಂಪು.   ನಾನು ಸಿಎಂ ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ಕಾರ್ಯಕ್ರಮ ರೂಪಿಸುತ್ತೇವೆ .  ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ.  ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇವೆ.  ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ  ಎಂದು ಸ್ಪಷ್ಟಪಡಿಸಿದರು.

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತಕತೆ ಆಗಿಲ್ಲ.  ಅಧಿವೇಶನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ ಪಕ್ಷವನ್ನು ಬೆಳೆಸೋದು ನಮ್ಮಿಬ್ಬರ ಕರ್ತವ್ಯ. ಹೈಕಮಾಂಡ್ ನಿರ್ಧಾರದಂತೆ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ಜನರಿಗೆ ಸೇವೆ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: power sharing, DCM, DK Shivakumar, clarified