ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ, ಯಾವ ಮನಸ್ತಾಪವೂ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಡಿಸೆಂಬರ್,2,2025 (www.justkannada.in): ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ಮನಸ್ತಾಪವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮಲ್ಲಿ ಯಾವ ಮನಸ್ತಾಪವೂ ಇಲ್ಲ. ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ  ಒಗ್ಗಟ್ಟಾಗಿದ್ದೇವೆ. ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಲವು ವಿಚಾರಗಳು ಚರ್ಚೆಯಾಗಿದೆ.  ಪಕ್ಷ, ಸರ್ಕಾರ ಅಧಿವೇಶನದ ಬಗ್ಗೆ ಚರ್ಚೆಯಾಗಿದೆ.  ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ ಮಾಡಿದ್ದೇವೆ  ಎಂದರು.

ಶಾಸಕರಿಗೆ ಸಂದೇಶ ನೀಡಿದ್ದೇವೆ.  ನಮ್ಮದು ಒಂದೇ ಧ್ವನಿ ಇದೆ . ಎಲ್ಲಾ ಶಾಸಕರು ಒಟ್ಟಾಗಿದ್ದೇವೆ ವಿಪಕ್ಷದವರು ಮಾತ್ರ  ಖಾಲಿ ಡಬ್ಬ ಎಂದು ಡಿಕೆ ಶಿವಕುಮಾರ್ ಟೀಕಿಸಿದರು.

Key words: CM Siddaramaiah, Breakfast meeting, DCM, DK Shivakumar