ನಾಳೆ ಕರ್ನಾಟಕ ಬಂದ್ ಮಾಡದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ.

ಬೆಂಗಳೂರು,ಸೆಪ್ಟಂಬರ್,28,2023(www.justkannada.in):  ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ಬಂದ್ ಮಾಡದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಬಂದ್ ಮಾಡಲು ಯಾವುದೇ ಅವಕಾಶವಿಲ್ಲ. ಪ್ರತಿಭಟನೆ ಮಾಡುವವರಿಗೆ ನಾವು ಅಡ್ಡಿ ಮಾಡಲ್ಲ. ಜವಾಬ್ದಾ ರಿ ಇದ್ದವರು ಕೋರ್ಟ್ ಆದೇಶ ಪಾಲಿಸಬೇಕು. ಸಾರ್ವಜನಿಕರಿಗೆ ನಾವು ರಕ್ಷಣೆ ಕೊಡಲೇಬೇಕು ಎಂದರು.

ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ ನಾಳೆ ಕಾವೇರಿ ವಿಚಾರವಾಗಿ ಮೀಟಿಂಗ್ ಇದೆ ನೇರವಾಗಿ ಭಾಗಿಯಾಗುವಂತೆ  ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ.  ಹಿರಿಯ ವಕೀಲರ ಸಭೆಯನ್ನೂ ಹಮ್ಮಿಕೊಳ್ಳಲಾಗಿದೆ.  ಸಮಿತಿ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿದೆ. ಆದರೆ ನೀರು ಬಿಡುವುದು ಕಷ್ಟ ಅಂತಾ ವಾದ ಮಾಡಿದ್ದೇವೆ. ನಾಳೆ ಸಭೆಯಲ್ಲಿ ಏನಾಗುತ್ತೆ ನೋಡೋಣ ಎಂದರು.

Key words: DCM -DK Shivakumar –appeals- not – Karnataka bandh -tomorrow.