Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ನನ್ನ ವಿರುದ್ಧದ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ- ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು.

ನನ್ನ ವಿರುದ್ಧದ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ- ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು.

ಬೆಂಗಳೂರು, ಆಗಸ್ಟ್ 30,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದ್ದು, ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಸರ್ಕಾರದ ವೈಪಲ್ಯಗಳ ಬಗ್ಗೆ ಜಾರ್ಜ್‌ಶೀಟ್ ಬಿಡುಗಡೆ ಮಾಡಿ ವರ್ಗಾವಣೆ ದಂಧೆ ಮಾಡಿದ್ಧ ರಾಜ್ಯ ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕುಟುಕಿದ್ದಾರೆ.

ತಮ್ಮ ಮತ್ತು ಸರ್ಕಾರದ ವಿರುದ್ಧ ವರ್ಗಾವಣೆ ಆರೋಪಕ್ಕೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನನ್ನ ವಿರುದ್ಧದ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ  ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಹೇಳಿದರು.

ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್ ​​ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್​ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್​ ಖಾತೆಗೆ 2000 ರೂ ಹಣ ಜಮೆಯಾಗುತ್ತದೆ ಎಂದು ಡಿಕೆಶಿ ಸಂತಸ ವ್ಯಕ್ತಪಡಿಸಿದರು.

Key words: DCM-DK Shivakumar- challenge – retire – politics – bjp