Monday, September 14, 2026

BDA Apartments

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್ BDA JK_Adv BDA Adv
Home Front Page ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೇ ಹಲವೆಡೆ ಮರ, ವಿದ್ಯುತ್ ಕಂಬಳ ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ  ಬೆಂಗಳೂರಿನಲ್ಲಿ ಸುರಿದ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಿಣೆ ಹಾಕಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೇ  ಬೆಂಗಳೂರು ಸಿಟಿ ರೌಂಡ್ಸ್ ಹಾಕಲಿರುವ ಡಿಸಿಎಂ ಡಿಕೆ ಶಿವಕುಮಾರ್ ಮಳೆಯಿಂದಾದ ಸಮಸ್ಯೆ ಆವಾಂತರಗಳನ್ನ ವೀಕ್ಷಿಸಲಿದ್ದಾರೆ ನಾಳೆ ಮಧ್ಯಾಹ್ನದ ವೇಳೆಗೆ ನಗರ ಪ್ರದಕ್ಷಿಣೆ ಹಾಕಲಿದ್ದಾರೆ ಎನ್ನಲಾಗಿದೆ.

Key words: Rain, DCM, DK Shivakumar, Bangalore, city rounds, tomorrow