Tuesday, September 1, 2026

BDA Apartments

Home Front Page ಸಂಕ್ರಾಂತಿ ಮರುದಿನವೇ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್

ಸಂಕ್ರಾಂತಿ ಮರುದಿನವೇ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜನವರಿ,12,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್  ಜನವರಿ 16 ಹಾಗೂ ಜನವರಿ 22ರಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜನಮರಿ 16ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಸಮಯ ನೀಡಿದರೇ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ವೀಕ್ಷಕರ ಸಭೆಯ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ಚರ್ಚಿಸುವ ಸಾಧ್ಯತೆ ಇದೆ. ಇದೆ ಸಂದರ್ಭದಲ್ಲಿ ರಾಜ್ಯದಲ್ಲಿ ಆಗುತ್ತಿರುವ ಗೊಂದಲಗಳ ಕುರಿತು  ರಾಹುಲ್ ಗಾಂಧಿ ಅವರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ

ಜನವರಿ 22ರಂದು ಕೂಡ ಡಿಕೆ ಶಿವಕುಮಾರ್  ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ

Key words: DCM, DK Shivakumar, visit, Delhi, day, after, Sankranti