Friday, August 21, 2026

BDA Apartments

Home Front Page ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ ಎಂದ ಡಿಸಿಎಂ ಡಿ.ಕೆ...

ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ ಎಂದ ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಆಗಸ್ಟ್,18,2023(www.justkannada.in): ಬಿಜೆಪಿ ಶಾಸಕ ಎಸ್,ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಸಂಬಂಧ ಈ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಕೆಲ ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡಿದ್ದಾರೆ. ಎಸ್ ,ಟಿ ಸೋಮಶೇಖರ್ ವೈಯಕ್ತಿಕವಾಗಿ ಹೇಳಿರಬಹುದು.  ಈ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ. ನಾನು ಯಾರಿಗೂ ಯಾವುದೇ ಟಾಸ್ಕ್ ಕೊಟ್ಟಿಲ್ಲ ಎಂದರು.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಲೋಡ್ ಶೆಡ್ಡಿಂಗ್ ಬಗ್ಗೆ ನನಗೆ  ಸರಿಯಾದ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ.  ಲೋಡ್ ಶೆಡ್ಡಿಂಗ್ ಗೂ ಗೃಹಜ್ಯೋತಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಆರ್ ಎಸ್ ನಿಂದ ತಮಿಳುನಾಡಿಗೆ ನೀರು ಬಿಡುವುದಕ್ಕೆ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ರೈತರನ್ನ ಕಾಪಾಡುವುದು ನಮ್ಮ ಜವಾಬ್ದಾರಿ ಹೀಗಾಗಿ ನೀರು ಬಿಟ್ಟಿದ್ದೇವೆ ಎಂದು ಸಮರ್ಥಸಿಕೊಂಡರು.

Key words: DCM-DK Shivakumar – ST Somashekhar- inclusion – Congress