Friday, September 18, 2026

BDA Apartments

Home Front Page ಮೊದಲು ನಿಮ್ಮ ಮನೆ ರಿಪೇರಿ ಮಾಡ್ಕೊಳ್ಳಿ- ಬಸವಣ್ಣನ ವಚನದ ಮೂಲಕ ಹೆಚ್.ಡಿಕೆಗೆ ಡಿಕೆ ಶಿವಕುಮಾರ್ ಟಾಂಗ್.

ಮೊದಲು ನಿಮ್ಮ ಮನೆ ರಿಪೇರಿ ಮಾಡ್ಕೊಳ್ಳಿ- ಬಸವಣ್ಣನ ವಚನದ ಮೂಲಕ ಹೆಚ್.ಡಿಕೆಗೆ ಡಿಕೆ ಶಿವಕುಮಾರ್ ಟಾಂಗ್.

ಬೆಂಗಳೂರು,ಮೇ,10,2024 (www.justkannada.in): ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐಗೆ ಒಪ್ಪಿಸುವಂತೆ ರಾಜ್ಯಪಾಲರನ್ನ ಭೇಟಿಯಾಗಿ ಮನವಿ ಸಲ್ಲಿಸಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿ ಬಸವಣ್ಣನ ವಚನದ ಮೂಲಕ ತಿರುಗೇಟು ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಲೋಕದ ಡೊಂಕು ನೀವೇಕೆ ತಿದ್ದುವಿರಿ. ಮೊದಲು ನಿಮ್ಮ ಮನೆ ರಿಪೇರಿ ಮಾಡಿಕೊಳ್ಳಿ.  ನಿಮ್ಮಮನೆಯ ಡೊಂಕು ತಿದ್ದುಕೊಳ್ಳಿ ಉಳಿದಿದ್ದು ಅಮೇಲೆ ಮಾತನಾಡೋಣ ಎಂದು  ಹೇಳಿದ್ದಾರೆ.ಮೊದಲು ನಿಮ್ಮ ಮನೆ ರಿಪೇರಿ ಮಾಡ್ಕೊಳ್ಳಿ dks-dk-shivakumar dks dk shivakumar

ನಿನ್ನೆ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ  ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐಗೆ ಒಪ್ಪಿಸುವಂತೆ ಮನವಿ ಮಾಡಿದ್ದರು.

Key words: DCM, DK Shivakumar, Tong, HDK