ಡಿಸಿಎಂ ಡಿ.ಕೆ ಶಿವಕುಮಾರ್ ಬೆಳಗಾವಿ ಪ್ರವಾಸದ ವೇಳೆ ಗೈರಾದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ.

ಬೆಳಗಾವಿ,ಅಕ್ಟೋಬರ್,19,2023(www.justkannada.in): ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಬೆಳಗಾವಿ ಪ್ರವಾಸ ಕೈಗೊಂಡಿದ್ದ ವೇಳೆ ತಾವು  ಗೈರಾಗಿದ್ದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಶಿವಕುಮಾರ್ ಅವರದ್ದು ಖಾಸಗಿ ಕಾರ್ಯಕ್ರಮವಾಗಿತ್ತು. ನಾನು ಜಿಲ್ಲೆಯಲ್ಲಿ ಇರುವುದಿಲ್ಲ ಎಂದು ಡಿಕೆ ಶಿವಕುಮಾರ್ ಗೆ ಒಂದು ದಿನ ಮೊದಲೇ ಹೇಳಿದ್ದೆ. ಬಹಳ ಮಂದಿ ಪ್ರವಾಸಕ್ಕೆ ಹೋಗಿದ್ದರು. ಜಿಲ್ಲಾಧ್ಯಕ್ಷರು ಕೂಡ ಪ್ರವಾಸ ಹೋಗಿದ್ದರು. ಹೀಗಾಗಿ ಅದಕ್ಕೆ ವಿಶೇಷ ಕಲ್ಪನೆ ಅರ್ಥ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಹಲವು ಬಾರಿ ಕಾಂಪ್ರಮೈಸ್ ಮಾಡಿಕೊಳ್ಳಬೇಕಾಗುತ್ತೆ.  ಮುಂದೆಯೂ ನಾನು ಪಕ್ಷದ ಸಲುವಾಗಿ ಕಾಂಪ್ರಮೈಸ್ ಆಗುತ್ತೇನೆ.    ಟ್ರಾನ್ಸಫರ್ ವಿಷಯದಲ್ಲಿ ಈ ಹಿಂದೆ ಕೆಲವು ಗೊಂದಲ ಇತ್ತು . ಈಗ ಟ್ರಾನ್ಸ್ ಫರ್ ಮುಗಿದು ಹೋದ ಕಥೆ. ನನಗೆ ಅಸಮಾಧಾನ ಇಲ್ಲ. ಎಲ್ಲಾ ಒಗ್ಗಟ್ಟಾಗಿ ಇದ್ದೇವೆ ಎಂದು ಸಚಿವ  ಸತೀಶ್ ಜಾರಕಿಹೊಳಿ ತಿಳಿಸಿದರು.

Key words: DCM DK Shivakumar- visit – Belgaum- minister -Satish Jarakiholi -clarified