ಬೆಂಗಳೂರು,ಆಗಸ್ಟ್,15,2025 (www.justkannada.in): ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಇಂದು ಚಿನ್ನಯ್ಯನಪಾಳ್ಯದ ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿ 10ವರ್ಷ ಬಾಲಕ ಮುಬಾರಕ್ ಸಾವನ್ನಪ್ಪಿದ್ದು ಸಿಲಿಂಡರ್ ಸ್ಪೋಟದಿಂದ ಈ ಘಟನೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಅವರು, ಸಿಲಿಂಡರ್ ಸ್ಪೋಟದಿಂದ ಘಟನೆ ಎಂಬ ಮಾಹಿತಿ ಇದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಒಂದು ಸಾವಾಗಿದೆ. ಈಗಾಗಲೇ ಅವರಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆಯ ಬಗ್ಗೆ ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ . ಪೊಲೀಸ್ ಅಧಿಕಾರಿಗಳು ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ಪೊಲೀಸರು ಎಲ್ಲವನ್ನೂ ಪರಿಶೀಲನೆ ಮಾಡಿದ್ದಾರೆ ಎಂದರು.
Key words: Mysterious, explosion, Bangalore, DCM, DK Sivakumar