Sunday, September 20, 2026

BDA Apartments

Karnataka Drought Relief DCM Parameshwara BDA JK_Adv BDA Adv
Home Front Page ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತ ಕಾಯಲು ಮತ್ತು ಸಮಸ್ಯೆಗೆ ಸ್ಪಂದಿಸಲು ರಾಜ್ಯ ಸರ್ಕಾರ ಸದಾ ಸಿದ್ಧ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್‌, ರಾಜ್ಯದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಸಮಗ್ರವಾಗಿ ಚರ್ಚಿಸಲಾಗುತ್ತಿದ್ದು, ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರೈತರನ್ನು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು.

ರಾಜ್ಯಾದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಧಾನಮಂಡಲದಲ್ಲಿ ಸಮಗ್ರ ಚರ್ಚೆ ಅಗತ್ಯವಿದೆ. ಬರ ಪರಿಹಾರಕ್ಕಾಗಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಕೇಂದ್ರ ಸರ್ಕಾರದಿಂದ ಯಾವ ರೀತಿಯ ನೆರವು ಪಡೆಯಬೇಕು ಎಂಬುದರ ಬಗ್ಗೆ ಒಗ್ಗಟ್ಟಿನಿಂದ ಚರ್ಚೆ ನಡೆಸುವ ಉದ್ದೇಶದಿಂದ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದರು.ಬರದ ಜೊತೆಗೆ ಕಸ್ತೂರಿರಂಗನ್ ವರದಿ ಬಗ್ಗೆಯೂ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.Karnataka Drought Relief DCM Parameshwara jk02_new jk02 new

Key words: Government, ready , safeguard, farmers, respond, distress, DCM, Dr. G. Parameshwara

English Summary
Title

Karnataka Drought Relief: DCM G Parameshwara Assures Farm Loan Waiver & Support to Fight Farmers Distress

Short Description
Karnataka state government is taking urgent action to protect farmers facing severe drought distress. Deputy Chief Minister Dr. G. Parameshwara assured full administrative backing, warning microfinance institutions against harassing agricultural borrowers for loan recovery. To mitigate widespread crop damage across 101 drought-hit taluks, Karnataka is fast-tracking comprehensive surveys and expanding its relief umbrella. The state is formally urging the Union Government to relax NDRF criteria for enhanced financial relief while actively petitioning the Centre to implement a nationwide farm loan waiver scheme to secure the livelihoods of rural communities.