Sunday, August 9, 2026

BDA Apartments

Home Front Page ಎಲೆಕ್ಟ್ರಿಕ್ ಬಸ್ ನಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪ್ರಾಯೋಗಿಕ ಸಂಚಾರ..

ಎಲೆಕ್ಟ್ರಿಕ್ ಬಸ್ ನಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪ್ರಾಯೋಗಿಕ ಸಂಚಾರ..

ಬೆಂಗಳೂರು,ಅಕ್ಟೋಬರ್,22,2020(www.justkannada.in): ಬೆಂಗಳೂರಿನ ಶಾಂತಿ ನಗರದಲ್ಲಿರುವ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದಿಂದ ವಿಧಾನಸೌಧದವರೆಗೆ ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಎಲೆಕ್ಟ್ರಿಕ್ ಬಸ್ಸಿನಲ್ಲಿ ಪ್ರಾಯೋಗಿಕ ಸಂಚಾರ ನಡೆಸಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಾದ  ಬಿಎಸ್ ಯಡಿಯೂರಪ್ಪ ಅವರು ಎಲೆಕ್ಟ್ರಿಕ್ ಬಸ್ಸುಗಳನ್ನು ವೀಕ್ಷಿಸಿ ನೂತನ ವ್ಯವಸ್ಥೆ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಬಿಎಂಟಿಸಿ ಅಧ್ಯಕ್ಷರಾದ  ನಂದೀಶ್ ರೆಡ್ಡಿ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಕಳಸದ್, ಬಿಎಂಟಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.DCM- Laxman Savdi –Experimental- Traffic - Electric Bus.

Key words: DCM- Laxman Savdi –Experimental- Traffic – Electric Bus.