ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಿಸಿಎಂ ಲಕ್ಷ್ಮಣ್ ಸವದಿ ಸಂತಸ ವ್ಯಕ್ತಪಡಿಸಿದ್ದು ಹೀಗೆ…

ಬೆಂಗಳೂರು,ನವೆಂಬರ್,17,2020(www.justkannada.in): ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನ ಸ್ಥಾಪಿಸಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ ಹಿನ್ನೆಲೆ ಈ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಸಂತಸ ವ್ಯಕ್ತಪಡಿಸಿದ್ದಾರೆ.kannada-journalist-media-fourth-estate-under-loss

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಲಕ್ಷ್ಮಣ್ ಸವದಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಸೂಕ್ತ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮೂಲಕ ಈ ಸಮುದಾಯದಲ್ಲಿನ ಬಡವರು ಮತ್ತು ಹಿಂದುಳಿದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದ ಶ್ರೇಯಸ್ಸು ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಈ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡ ಅವರಿಗೆ ನಮ್ಮೆಲ್ಲರ ಕೃತಜ್ಞತೆಗಳು ಎಂದು  ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.dcm-laxman-savdi-pleased-express-happiness-veerashaiva-lingayat-development-corporation

ನಿನ್ನೆಯಷ್ಟೇ  ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ವೀರಶೈವ ಲಿಂಗಾಯತರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂದು ಮನವಿ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

Key words: DCM Laxman Savdi- pleased –express- happiness-Veerashaiva Lingayat Development Corporation.