Thursday, August 13, 2026

BDA Apartments

Home Front Page ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಲಕ್ಷ್ಮಣ್ ಸವದಿ….

ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಲಕ್ಷ್ಮಣ್ ಸವದಿ….

ನವದೆಹಲಿ,ಜು,29,2020(www.justkannada.in):  ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಇತ್ತೀಚೆಗೆ ಬಾರಿ ಸುದ್ದಿಯಾಗಿತ್ತು. ಡಿಸಿಎಂ ಲಕ್ಷ್ಮಣ್ ಸವದಿ ದೆಹಲಿಗೆ ತೆರಳುತ್ತಿದ್ದಂತೆ ನಾಯಕತ್ವ ಬದಲಾವಣೆ ಕುರಿತು ಚರ್ಚೆಯಾಗುತ್ತಿತ್ತು. ಇದೀಗ ಈ ಗೊಂದಲಗಳಿಗೆಲ್ಲಾ ಸ್ವತಃ ಡಿಸಿಎಂ ಲಕ್ಷ್ಮಣ್ ಸವದಿ ತೆರೆ ಎಳೆದಿದ್ದಾರೆ.jk-logo-justkannada-logo

ಈ ಕುರಿತು ಇಂದು ನವದೆಹಲಿಯಲ್ಲಿ ಮಾತನಾಡಿರುವ ಡಿಸಿಎಂ ಲಕ್ಷ್ಮಣ್ ಸವದಿ, ಬಿಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಬದಲಾವಣೆ ಇಲ್ಲ. ಬಿಎಸ್ ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ. ರಾಜ್ಯದಲ್ಲಿ ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ. ಅನಗತ್ಯವಾಗಿ ಗಾಳಿ ಸುದ್ದಿ ಹರಡಿಸಲಾಗುತ್ತಿದೆ. ಆದರೆ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.dcm-laxman-sawadi-state-bjps-leadership-change

ಹಾಗೆಯೇ ದೆಹಲಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ್ ಸವದಿ, ರಾಜಕೀಯ ಉದ್ದೇಶ ಇಟ್ಟುಕೊಂಡು ದೆಹಲಿಗೆ ಬಂದಿಲ್ಲ. ನನ್ನ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಭೇಟಿಗೆ ಬಂದಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ತಿಳಿಸಿದರು.

Key words: DCM -Laxman Sawadi -state -BJP’s leadership -change.