ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಮೂವರಿಗೆ ಸಚಿವ ಸ್ಥಾನ ನೀಡಲಿ- ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ.

ಬಾಗಲಕೋಟೆ,ಮೇ,17,2023(www.justkannada.in):  ರಾಜ್ಯದಲ್ಲಿ ಸಿಎಂ ಹುದ್ದೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದ್ದರೇ ಇತ್ತ ಸ್ವಾಮೀಜಿಗಳು ತಮ್ಮ ಸಮುದಾಯದ ನಾಯಕರಿಗೆ ಡಿಸಿಎಂ ಮತ್ತು ಸಚಿವ ಸ್ಥಾನ ನೀಡುವಂತೆ ಆಗ್ರಹಿಸುತ್ತಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ ಸಹ ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಸ್ಥಾನ ಮತ್ತು ಮೂವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ಕಾಂಗ್ರೆಸ್ ವರಿಷ್ಠರು ಯಾರನ್ನ ಸಿಎಂ ಮಾಡುತ್ತಾರೋ ಮಾಡಲಿ.  ಡಿಕೆ ಶಿವಕುಮಾರ್,  ಸಿದ್ದರಾಮಯ್ಯ ಇಬ್ಬರು ಶ್ರೀಪೀಠಧ ಸಂಪರ್ಕದಲ್ಲಿದ್ದಾರೆ. ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಸ್ಥಾನ ನೀಡಲಿ. ಪಂಚಮಸಾಲಿ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂದಿದ್ದಾರೆ.

ಹಾಗೆಯೇ  ಶಾಸಕ ವಿಜಯಾನಂದ ಕಾಶಪ್ಪನವರ್ ಗೆ ಸಚಿವ ಸ್ಥಾನ ನೀಡಬೇಕೆಂದು  ಸ್ವಾಮೀಜಿ ಒತ್ತಾಯಿಸಿದ್ದಾರೆ.

Key words: DCM – Panchmasali-community – ministerial-post-jayamruthyunjaya Swamiji