Thursday, September 10, 2026

BDA Apartments

Home Front Page ಬರಗಾಲ ಎದುರಿಸಲು ಎಲ್ಲಾ ರೀತಿ ಸಿದ್ದ: ಶೀಘ್ರದಲ್ಲೇ 2ನೇ ಬರ ಪಟ್ಟಿ ಬಿಡುಗಡೆ- ಡಿಸಿಎಂ ಪರಮೇಶ್ವರ್

ಬರಗಾಲ ಎದುರಿಸಲು ಎಲ್ಲಾ ರೀತಿ ಸಿದ್ದ: ಶೀಘ್ರದಲ್ಲೇ 2ನೇ ಬರ ಪಟ್ಟಿ ಬಿಡುಗಡೆ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್,10,2026 (www.justkannada.in):  ರಾಜ್ಯದಲ್ಲಿ ಆವರಿಸಿರುವ ಬರಗಾಲವನ್ನ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲಿ ಸಿದ್ದವಾಗಿದೆ. ಶೀಘ್ರದಲ್ಲೇ  ಬರ ತಾಲ್ಲೂಕುಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.

ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.  ದೃಢ ಕರ್ನಾಟಕದ ಸಂಕಲ್ಪ ಶತಕದ ಪಥ ಪ್ರಗತಿ ರಥ  ಎಂಬ ದ್ಯೇಯವಾಕ್ಯದೊಂದಿಗೆ ಕಾರ್ಯಕ್ರ,ಮ ಆಯೋಜನೆ ಮಾಡಲಾಗಿದ್ದು ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಸಚಿವರು ಶಾಸಕರು ಭಾಗಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್,  ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಡಿಕೆ ಶಿವಕುಮಾರ್ ಸರ್ಕಾರ 100 ದಿನ ಪೂರೈಸಿದ್ದಕ್ಕೆ ಅದ್ದೂರಿಯಾಗಿ ಕಾರ್ಯಕ್ರಮ ಮಾಡಬೇಕಿತ್ತು ರಾಜ್ಯದಲ್ಲಿ ಬರಗಾಲ ಇರುವುದರಿಂದ ಸರಳವಾಗಿ ಆಚರಿಸಲು ನಿರ್ಧಾರ ಮಾಡಿದ್ದೇವೆ ಎಂದರು.

ಬರಗಾಲವನ್ನು ಎದುರಿಸಲು ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಿದೆ.  ರಾಜ್ಯಕ್ಕೆ ಅನುದಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ತೋರುತ್ತಿದೆ.   ಹಿಂದೆಯೂ ರಾಜ್ಯಕ್ಕೆ ತಾರತಮ್ಯ ತೋರಿದರು ಇದನ್ನು ಪ್ರಶ್ನಿಸಿ ನಾವು ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. ಕೋರ್ಟ್ ತೀರ್ಪಿನ ಬಳಿಕ ಕೇಂದ್ರ ನಮಗೆ ಅನುದಾನ ನೀಡಿತು. ಈ ಬಾರಿ ರಾಜ್ಯದಲ್ಲಿ ತೀವ್ರ ಬರಗಾಲ ಇದೆ.  ರಾಜ್ಯ ಸರ್ಕಾರ ಬರ ಅಧ್ಯಯನ ನಡೆಸಿದೆ ಈಗ 102 ತಾಲ್ಲೂಕು ಬರಪಟ್ಟಿಗೆ ಸೇರಿಸಿ ಬಿಡುಗಡೆ ಮಾಡಲಾಗಿದೆ.  ಶೀಘ್ರದಲ್ಲೇ ಬರಪೀಡಿತ 2ನೇ ಪಟ್ಟಿಯೂ ಬಿಡುಗಡೆ ಮಾಡುತ್ತೇವೆ ಎಂದರು.

Key words: Celebrations, 100 days, Congress government, DCM Parameshwar