ಬೆಂಗಳೂರು,ಜುಲೈ,6,2026 (www.justkannada.in): ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವು ಬರುತ್ತಿದೆ. ಹೀಗಾಗಿ ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್, ಚಿಕ್ಕಮಗಳೂರು ಹುಬ್ಬಳ್ಳಿ ಭಾಗದಲ್ಲಿ ಮಳೆಯಾಗುತ್ತಿದೆ. ಜಲಾಶಯಗಳಿಗೆ ನೀರು ಒಳಹರಿವು ಬರುತ್ತಿದೆ. ಕೆಆರ್ ಎಸ್ ಜಲಾಶಯಕ್ಕೂ ಒಳಹರಿವು ಹೆಚ್ಚುತ್ತಿದೆ. ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ ಎಂದರು. 
ಗುಳೆ ಹೋಗುವುದನ್ನ ತಡೆಯಲು ಕ್ರಮ ತೆಗೆದುಕೊಳ್ಳುತ್ತೇವೆ ಈಗಾಗಲೇ ಮೇವಿನ ಕಿಟ್ ಕೊಟ್ಟಿದ್ದೇವೆ. ವಿಶೇಷ ಪ್ಯಾಕೇಜ್ ಬಗ್ಗೆ ಇಷ್ಟು ಬೇಗ ಚಿಂತನೆ ಇಲ್ಲ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
Key words: Rain, Drinking water, No problem, DCM, Parameshwar







