Monday, August 3, 2026

BDA Apartments

Home Front Page ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಆಗ್ರಹ: ಅಮಿತ್ ಶಾ, ಸಂತೋಷ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ...

ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಆಗ್ರಹ: ಅಮಿತ್ ಶಾ, ಸಂತೋಷ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ..

ಕೊಪ್ಪಳ,ಆ,27,2019(www.justkannada.in):  ಸಿಎಂ  ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಯಾಗಿ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೆ  ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ಕೈತಪ್ಪಿದ್ದಕ್ಕೆ ಬಳ್ಳಾರಿ ಕೊಪ್ಪಳದಲ್ಲಿ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಗೋವಿಂದ ಕಾರಜೋಳ ಅಶ್ವಥ್ ನಾರಾಯಣ್ , ಲಕ್ಷ್ಮಣ್ ಸವದಿಗೆ ಡಿಸಿಎಂ ಸ್ಥಾನ ನೀಡಲಾಗಿದೆ.  ಆದರೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಕೈತಪ್ಪಿದ್ದು ಹೀಗಾಗಿ ತಮ್ಮ ನಾಯಕನಿಗೆ ಡಿಸಿಎಂ ಹುದ್ದೆ ನೀಡಬೇಕೆಂದು ಅವರ ಅಭಿಮಾನಿಗಳು ಬೀದಿಗಿಳಿದಿದ್ದಾರೆ.   ಕೊಪ್ಪಳದ ಕನಕಗಿರಿಯಲ್ಲಿ  ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ಬಿಜೆಪಿ ವರಿಷ್ಠ ಅಮಿತ್ ಶಾ ಅವರ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲೂ ಭುಗಿಲೆದ್ದ ಆಕ್ರೋಶ….

ಶ್ರೀರಾಮುಲುಗೆ ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಬಳ್ಳಾರಿಯಲ್ಲೂ ಆಕ್ರೋಶ ಭುಗಿಲೆದ್ದಿದ್ದು, ಶ್ರೀರಾಮುಲು ಉತ್ತರ ಕರ್ನಾಟಕದ ಜನಪ್ರಿಯ ನಾಯಕ. ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಕೊಡಬೇಕು ಎಂದು ಆಗ್ರಹಿಸಿ  ಶ್ರೀರಾಮುಲು ಅಭಿಮಾನಿಗಳು ರಸ್ತೆ ಮಧ್ಯೆ ಟಯರ್ ಗೆ ಬೆಂಕಿ ಹಚ್ಚಿ ಧರಣಿ ನಡೆಸಿದ್ದಾರೆ.

Key words: DCM –post- Sreeramulu-protest-fans-koppal-ballari