Saturday, September 12, 2026

BDA Apartments

ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ BDA JK_Adv BDA Adv
Home Front Page ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ.

ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ.

ಚಾಮರಾಜನಗರ,ಫೆಬ್ರವರಿ,7,2023(www.justkannada.in): ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ಹುಲಿಯೊಂದರ ಮೃತದೇಹ ಪತ್ತೆಯಾಗಿದೆ.

ಬಂಡೀಪುರ ಅರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಹುಲಿ ಮೃತದೇಹ  ಪತ್ತೆಯಾಗಿದೆ. ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ರೈತರೊಬ್ಬರು ಹೋಗಿದ್ದಾಗ ಮೃತದೇಹ ಪತ್ತೆಯಾಗಿದ್ದು, ಸದ್ಯ ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.

ವಿಷಯ ತಿಳಿದು ಅರಣ್ಯಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಹಲವು ದಿನಗಳಿಂದ ಜಮೀನುಗಳಲ್ಲಿ ಹುಲಿ‌ ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಬೇಕಿದೆ.

Key words: Dead body – tiger- found –lake-Chamaraja nagar