ಇಂದು ಡೆಡ್‌ ಲೈನ್: ಮೈಸೂರಿನ ಅಂಗಡಿ ಮಳಿಗೆಗಳಲ್ಲಿ ರಾರಾಜಿಸುತ್ತಿವೆ ಕನ್ನಡ ನಾಮಫಲಕ

ಮೈಸೂರು,ಫೆಬ್ರವರಿ,28,2024(www.justkannada.in):  ಶೇ.60ರಷ್ಟು ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಇಂದು ಕೊನೆಯ ದಿನವಾಗಿದ್ದು ಎಚ್ಚೆತ್ತುಕೊಂಡಿರುವ  ಸಾಂಸ್ಕೃತಿಕ ನಗರಿ ಮೈಸೂರಿನ ವ್ಯಾಪಾರಿಗಳು , ಅಂಗಡಿ ಮಾಲೀಕರು ತಮ್ಮ ಅಂಗಡಿ ಮಳಿಗೆಗಳಲ್ಲಿ  ಕನ್ನಡ ನಾಮಫಲಕ ಅಳವಡಿಸಿದ್ದಾರೆ.

ನಗರದ ಹಲವು ಅಂಗಡಿ ಮಳಿಗೆಗಳಲ್ಲಿ ಕನ್ನಡ ನಾಮ ಫಲಕ ರಾರಾಜಿಸುತ್ತಿದೆ.  ಬೆಂಗಳೂರು ಸೇರಿ ರಾಜ್ಯಾದ್ಯಂತ ವ್ಯಾಪಾರಿಗಳು ಎಚ್ಚೆತ್ತಿದ್ದು, ಹಳೆ ನಾಮಫಲಕ ತೆಗೆದು ಹೊಸ ನಾಮಫಲಕ ಅಳವಡಿಕೆ ಮಾಡಿದ್ದಾರೆ. ದೊಡ್ಡ ಅಕ್ಷರದಲ್ಲಿ ಕನ್ನಡ ನಾಮಫಲಕ ಹಾಕಿದ್ದಾರೆ.

ಕನ್ನಡ ನಾಮಫಲಕ ಅಳವಡಿಕೆಗೆ ಸರ್ಕಾರ ಮತ್ತು ಕನ್ನಡಪರ ಸಂಘಟನೆಗಳು ಗಡುವು ನೀಡಿದ್ದರು. ಶೇ.60 ರಷ್ಟು ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ  ರಾಜ್ಯ ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿದ್ದವು.

ಈ ಹಿನ್ನೆಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.  ಆದರೆ ಇನ್ನೂ ಕೆಲವು ಅಂಗಡಿ ಮಾಲೀಕರು ಸರ್ಕಾರದ ಆದೇಶ ಸಮರ್ಪಕವಾಗಿ ಪಾಲಿಸುತ್ತಿಲ್ಲ. ಸರ್ಕಾರದ ಆದೇಶ ಪಾಲಿಸದ ಮಾಲಿಕರು ಮತ್ತು ಅಂಗಡಿ ಮಳಿಗಳ ವಿರುದ್ಧ ಹೋರಾಟ ಮಾಡುತ್ತೇವೆ. ಇನ್ನು ಒಂದೆರಡು ವಾರ ಗಡುವು ಕೊಡುತ್ತೇವೆ ಎಂಉ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

Key words: Dead line- today- Kannada nameplates – popular – shops – Mysore