ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿ:  ಭೀಕರ ಅಪಘಾತದಲ್ಲಿ 7 ಮಂದಿ ಸಾವು

ಬೆಂಗಳೂರು ಗ್ರಾಮಾಂತರ, ಫೆಬ್ರವರಿ,13,2026 (www.justkannada.in): ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ.

ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು  ಏಳು ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ (XUV Car) ನಡುವೆ ಸರಣಿ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಗಗನ್ ಎಂಬುವವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: death, accident, car, bike, canter lorry