ಸಿಡಿಎಸ್ ಬಿಪಿನ್ ರಾವತ್ ಸಾವು ಸಂಭ್ರಮಿಸಿದವರನ್ನ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು  ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ.

ಬೆಂಗಳೂರು,ಡಿಸೆಂಬರ್,11,2021(www.justkannada.in): ಸಿಡಿಎಸ್  ಬಿಪಿನ್ ರಾವತ್ ಅವರ ಸಾವನ್ನ ಸಂಭ್ರಮಿಸಿ ಪೋಸ್ಟ್ ಹಾಕಿ ವಿಕೃತಿ ಮೆರೆದಿದ್ದವರನ್ನ ಪತ್ತೆ ಹಚ್ಚಿ ಕ್ರಮಕೈಗೊಳ್ಳಲು ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ಆಗಬೇಕು ಎಂದು ದೂರವಾಣಿ ಮೂಲಕ ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ನಿನ್ನೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ ಮಿಡಿಯುತ್ತಿದೆ. ಅದರೆ ಕೆಲವರು ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ಗಳನ್ನ ಹಾಕಿರುವುದು ತೀರಾ ಖಂಡನೀಯ.  ಈ ರೀತಿ ವಿಕೃತಿ ಮನಸ್ಥಿತಿ ತೋರಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.

Key words: death -CDS Bipin Rawat- Home Minister -Arga Jnanendra -instructs