ರಾಯಚೂರು , ಶಿವಮೊಗ್ಗದಲ್ಲಿ ಕೊರೋನಾಗೆ ತಲಾ ಒಬ್ಬರು ಬಲಿ…

ರಾಯಚೂರು/ಶಿವಮೊಗ್ಗ,ಜು,8,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈ ನಡುವೆ ಶಿವಮೊಗ್ಗದಲ್ಲಿ ಓರ್ವ ಮತ್ತು ರಾಯಚೂರಿನಲ್ಲಿ ಓರ್ವ ವ್ಯಕ್ತಿ  ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.jk-logo-justkannada-logo

ರಾಯಚೂರಿನ ಮಾನ್ವಿ ತಾಲ್ಲೂಕಿನ 40 ವರ್ಷದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ.  ಸೋಂಕಿತ ಮಹಿಳೆ ಅಸ್ತಮದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಮೂಲಕ ರಾಯಚೂರಿನಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗದಲ್ಲೂ ಇಂದು ಕೊರೋನಾಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. 65 ವರ್ಷದ ವೃದ್ಧ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

Key words: death-corona – Shimoga- Raichur.