ಬಳ್ಳಾರಿಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ…

ಬಳ್ಳಾರಿ,ಜೂ,25,2020(www.justkannada.in):  ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ.

ಕೊರೋನಾ ಸೋಂಕಿತ 73 ವರ್ಷದ ವೃದ್ಧ ಮೃತಪಟ್ಟಿರುವ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್,ಎಸ್ ನಕುಲ್ ಮಾಹಿತಿ ನೀಡಿದ್ದಾರೆ. ಬಳ್ಳಾರಿಯ ಸಂಡೂರು ತಾಲ್ಲೂಕಿನ ಮೃತ ವೃದ್ಧನಿಗೆ ಕೊರೋನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಂಕಿತ ವೃದ್ಧ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.death-coronavirus-bellary

ಬಳ್ಳಾರಿ ಜಿಲ್ಲೆಯಲ್ಲಿ ನಿನ್ನೆ ಕೊರೋನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದರು. ಸೋಂಕಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿತ್ತು. ಈ ನಡುವೆ ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ಕೊರೋನಾ ಸೋಂಕು ತಡೆಗೆ ಮತ್ತೆ  ಲಾಕ್ಡೌನ್ ಮಾಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಸಿಎಂ ಬಿಎಸ್ ವೈ ಅಧಿಕಾರಿಗಳು ಮತ್ತು ಸಚಿವರ ಜತೆ ಚರ್ಚಿಸಲಿದ್ದಾರೆ.

Key words: death-coronavirus – Bellary.