ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ: ಗಲಭೆ ಪೀಡಿತ ಪ್ರದೇಶದಲ್ಲಿ ಐಬಿ ಅಧಿಕಾರಿ ಶವ ಪತ್ತೆ…

ನವದೆಹಲಿ,ಫೆ,26,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚು ದೆಹಲಿ ಆವರಿಸಿದ್ದು, ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಹಿಂಸಾಚಾರದ ವೇಳೆ ಗಾಯಗೊಂಡು ಎಲ್ ಎನ್ ಜೆಪಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಮೂಲಕ ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಸಿಎಎ ಹಿಂಸಾಚಾರ ತಾರಕಕ್ಕೇರಿರುವಂತೆಯೇ ಇನ್ನೊಂದೆಡೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಯೊಬ್ಬರ ಶವ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಗಲಭೆ ಪೀಡಿತ ಚಾಂದ್ ಬಾಗ್ ಪ್ರದೇಶದಲ್ಲಿ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಶವ ಪತ್ತೆಯಾಗಿದೆ.  2017ರಲ್ಲಿ ಅಂಕಿತ್ ಶರ್ಮಾ ಅವರು  ಗುಪ್ತಚರ ಇಲಾಖೆಗೆ ಸೇರ್ಪಡೆಯಾಗಿದ್ದರು. ಈ ನಡುವೆ  ಅಂಕಿತ್ ಶರ್ಮಾ ಅವರ ಶವ ಚಾಂದ್ ಬಾಗ್ ಪ್ರದೇಶದ ಚರಂಡಿಯಲ್ಲಿ ಶವ ಪತ್ತೆಯಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧ ಪ್ರತಿಭಟನೆ ವೇಳೆ ಈಶಾನ್ಯ ದೆಹಲಿಯ ಹಲವು ಪ್ರದೇಶಗಳಲ್ಲಿ ಹಿಂಸಾಚಾರ ಉಂಟಾಗಿ ಈವರೆಗೆ 22 ಮಂದಿ ಸಾವನ್ನಪ್ಪಿದ್ದಾರೆ. ಈ ಮಧ್ಯೆ  ಗಲಭೆ ಪೀಡಿತ ಪ್ರದೇಶದಲ್ಲಿ ಐಬಿ ಅಧಿಕಾರಿಯ ಶವ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

Key words: Death – Delhi violence- rises22-  IB officer- deadbody– found