ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವು

ಚಿತ್ರದುರ್ಗ,ಜುಲೈ,23,2025 (www.justkannada.in): ಅಡಕೆ ಶೆಡ್ ನಿರ್ಮಾಣದ ವೇಳೆ ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್, ನಜೀರ್, ಫಾರೂಕ್ ಮೃತಪಟ್ಟವರು ಎನ್ನಲಾಗಿದೆ.  ಶ್ರೀನಿವಾಸ್ ತೋಟದಲ್ಲಿ ಅಡಕೆ ಶೆಡ್ ನಿರ್ಮಾಣದ ವೇಳೆ ಈ ಘಟನೆ ಸಂಭವಿಸಿದೆ.

ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿದ್ದು ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮೂವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೂವರು ಮೃತಪಟ್ಟಿದ್ದಾರೆ.  ಈ ಕುರಿತು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.vtu

Key words: Three people death, touching, electric